ಚೆನ್ನೈ: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಜಲ್ಲಿಕಟ್ಟು ಕ್ರೀಡೆ ನಡೆಸಲು ವಿಶೇಷ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪೊಲೀಸರು ಪ್ರತಿಭಟನಾನಿರತರನ್ನು ಚದುರಿಸಲು ಚೆನ್ನೈನ ಮರೀನಾ ಬೀಚ್ನಲ್ಲಿ ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ ಪೊಲೀಸರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದು, ಮರೀನಾ ಬೀಚ್ ಸಮೀಪದ ಐಸ್ ಹೌಸ್ ಪೊಲೀಸ್ ಠಾಣೆಗೆ ಹಾಗೂ ವಾಹನಗಳಿಗೆ ಉದ್ರಿಕ್ತರು ಬೆಂಕಿ ಹಾಕಿದ್ದಾರೆ.
ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಚೆನ್ನೈ ಸೇರಿದಂತೆ ಮಧುರೈ, ಕೊಯಮತ್ತೂರುಗಳಲ್ಲಿಯೂ ಪರಿಸ್ಥಿತಿ ತೀರ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ಪ್ರತಿಭಟನಾಕಾರರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಇದೀಗ ಮರೀನಾ ಬೀಚ್ನ ಸುತ್ತಮುತ್ತಲಿನಲ್ಲಿ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದ್ದು, ಬೀಚ್ ಕಡೆಗೆ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.