ಹೊಸದಿಲ್ಲಿ: ಸಾರ್ವಜನಿಕ ಹಿತಾಸಕ್ತಿಯು ಪ್ರತೀ ರಾಜ್ಯದಲ್ಲೂ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ನ್ಯಾಯಾಲಯ ಶುಕ್ರವಾರ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗೋವು ಸಾಗಾಣಿಕೆ ಮತ್ತು ಅದಕ್ಕೆ ಸಂಬಂಧಪಟ್ಟಂತಹ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ದೇಶದಲ್ಲಿನ ಕೆಲವು ರಾಜ್ಯಗಳಲ್ಲಿ ಮಾತ್ರ ಗೋಹತ್ಯೆ ನಿಷೇಧ ಹೇರಿದ್ದು, ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಅಕ್ರಮವಾಗಿ ಗೋ ಸಾಗಾಣಿಕೆ ಮಾಡಲಾಗುತ್ತಿದ್ದು, ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕಿದೆ ಹಾಗೂ ಎಲ್ಲಾ ರಾಜ್ಯಗಳಲ್ಲಿ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಈ ಹಿಂದೆ ಅರ್ಜಿಯನ್ನು ಸಲ್ಲಿಸಿತ್ತು.