ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾತ್ಮ ಗಾಂಧೀಜಿಯವರ 69ನೇ ಪುಣ್ಯತಿಥಿ ಹಿನ್ನಲೆ ಸೋಮವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಪೂಜ್ಯ ಬಾಪು ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿಯವರ ಸ್ಮಾರಕಕ್ಕೆ ಪುಣ್ಯತಿಥಿ ಹಿನ್ನಲೆಯಲ್ಲಿ ಭೆಟಿ ಕೊಟ್ಟು ಪುಷ್ಪನಮನ ಅರ್ಪಿಸಿಲಿದ್ದಾರೆ.