ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೊರ್ ತೆಹ್ಸಿಲ್ ನಲ್ಲಿರುವ ಅಮರ್ ಗರ್ಹ್ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿಕುಳಿತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಇದರಂತೆ ಉಗ್ರರನ್ನು ಸದೆಬಡಿಯಲು 52 ರಾಷ್ಟ್ರೀಯ ರೈಫಲ್ ಸೇನೆ ಕಾರ್ಯಾಚರಣೆಗಿಳಿದಿತ್ತು.ಸೇನೆ ಕಾರ್ಯಾಚರಣೆ ಆರಂಭ ಮಾಡುತ್ತಿದ್ದಂತೆಯೇ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.