ಹೊಸದಿಲ್ಲಿ: ಎಐಎಸಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಆರೋಪಗಳಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದನ್ನು ವಿರೋಧಿಸಿ, ಶಶಿಕಲಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲು ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನ್ಯಾಯಮೂರ್ತಿ ಎನ್.ವಿ. ರಮನ್, ಡಿ.ವೈ. ಚಂದ್ರಚೂಡ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಶಶಿಕಲಾ ಅವರಿಗೆ ಅವಕಾಶ ನೀಡಬಾರದು. ಪ್ರಕರಣದ ತೀರ್ಪನ್ನು ಪ್ರಕಟಿಸಬೇಕು ಎಂದು ಕೋರಿ ಪಿಐಎಲ್ ಅರ್ಜಿಯನ್ನು ಫೆ. 6ರಂದು ಸಲ್ಲಿಸಲಾಗಿತ್ತು.