ಹೊಸದಿಲ್ಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕೆಲ ದಿನಗಳ ಹಿಂದಷ್ಟೇ ಯುಎಇನ ಶರ್ಜಾಹ್ ನಲ್ಲಿರುವ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೋಮವಾರ ಆದೇಶ ನೀಡಿದ್ದಾರೆ.
ಮೃತಪಟ್ಟ ಮೂವರು ಭಾರತೀಯರನ್ನು ಕಿಶಾನ್ ಸಿಂಗ್, ಮೋಹನ್ ಸಿಂಗ್ ಮತ್ತು ಉಜೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಮೂವರು ಭಾರತೀಯರು ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು.
ಮೃತರ ಕುಟುಂಬಕ್ಕೆ ಅಗತ್ಯವಿರುವ ಸಹಾಯ ಹಾಗೂ ಪರಿಹಾರವನ್ನು ನೀಡುವುದಾಗಿ, ಮೃತರ ಕುಟುಂಬಕ್ಕೆ ಈ ಮೂಲಕ ಸಂತಾಪವನ್ನು ಸೂಚಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಪ್ರಕರಣ ಸಂಬಂಧ ಸುಷ್ಮಾ ಸ್ವರಾಜ್ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಕರಣ ಕುರಿತು ಭಾರತೀಯ ಅಧಿಕಾರಿಗಳು ತನಿಖೆ ನಡೆಸಲಿದ್ದು, ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ಸಾವಿನ ಹಿಂದೆ ಕೆಲವರ ಕೈವಾಡವಿದ್ದು, ಈಗಾಗಲೇ ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ. ಮಾತ್ರವಲ್ಲ ಶರ್ಜಾಹ್ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆಂದು ಖಾಸಗಿ ಮಾಧ್ಯಮವೊಂದು ವರದಿಯಲ್ಲಿ ಹೇಳಿದೆ.