ಚೆನ್ನೈ: ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ವಿರುದ್ಧ ವಿಧಾನಸಭೆಯಲ್ಲಿ ನಡೆಯುತ್ತಿದ್ದ ವಿಶ್ವಾಸ ಮತಯಾಚನೆ ವೇಳೆ ತೀವ್ರ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ತಮಿಳುನಾಡು ರಾಜ್ಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಮರೀನಾ ಬೀಚ್ ಬಳಿ ಪ್ರತಿಭಟನೆಗಿಳಿದಿದ್ದ ಡಿಎಂಕೆ ಮುಖಂಡ ಸ್ಟಾಲಿನ್ ಹಾಗೂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿ ನಂತರ ಬಿಡುಗಡೆಗೊಳಿಸಿದ್ದರು. ಮಾತ್ರವಲ್ಲ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅನುಸರಿಸಿದ ಕ್ರಮ ನಿಯಮ ಬಾಹಿರವಾದುದು ಸ್ಟಾಲಿನ್ ದೂರಿದ್ದರು.
ಇದೀಗ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಡಿಎಂಕೆ ಪ್ರಧಾನಕಚೇರಿಯಲ್ಲಿ ಸ್ಟಾಲಿನ್ ಅವರು ಪಕ್ಷದ ಎಲ್ಲಾ ಶಾಸಕರನ್ನು ಕರೆದು ವಿಶೇಷ ಸಭೆಯನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.