News Kannada
Wednesday, February 01 2023

ದೇಶ-ವಿದೇಶ

ತಮಿಳುನಾಡು ಸಿ.ಎಂ ಪಳನಿಸ್ವಾಮಿ ವಿಶ್ವಾಸಮತಕ್ಕೆ ವಿರೋಧ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ ನಾಯಕರು

Photo Credit :

ತಮಿಳುನಾಡು ಸಿ.ಎಂ ಪಳನಿಸ್ವಾಮಿ ವಿಶ್ವಾಸಮತಕ್ಕೆ ವಿರೋಧ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ ನಾಯಕರು

ಚೆನ್ನೈ: ಡಿಎಂಕೆ ಪಕ್ಷದ ನಾಯಕರು ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರ ವಿಶ್ವಾಸಮತಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪಳನಿಸ್ವಾಮಿಯವರು ತಮಿಳುನಾಡಿನ ವಿಧಾನಸಭೆಯಲ್ಲಿ ನಡೆದ ಅಧಿವೇಶನದ ಸಮಯ ಸಾಕಷ್ಟು ವಿರೋಧಗಳ ನಡೆವೆಯೂ ವಿಶ್ವಾಸಮತಯಾಚನೆ ಮಾಡಿ ಯಶಸ್ವಿಯಾಗಿದ್ದು, ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮತ್ತು ಡಿಎಂಕೆ ಮುಖಂಡ ಸ್ಟಾಲಿನ್ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ನಿನ್ನೆಯಷ್ಟೇ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿ ವಿಶ್ವಾಸಮತವನ್ನು ರದ್ದುಗೊಳಿಸುವಂತೆ ಕೋರಿ ಮಾತುಕತೆ ನಡೆಸಲಾಗಿತ್ತು.

ನಿನ್ನೆಯಷ್ಟೇ ಪಕ್ಷದ ಶಾಸಕರನ್ನು ಕರೆದು ವಿಶೇಷ ಸಭೆಯನ್ನು ನಡೆಸಿದ್ದ ಡಿಎಂಕೆ ಮುಖಂಡ ಸ್ಟಾಲಿನ್ ಅವರು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅನುಸರಿಸಿದ ಕ್ರಮ ನಿಯಮ ಬಾಹಿರವಾದುದು ಎಂದು ದೂರಿದ್ದು, ಫೆ.22 ರಂದು ರಾಜ್ಯದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಲಾಗಿದ್ದು, ಈ ಉಪವಾಸ ಸತ್ಯಾಗ್ರಹದಲ್ಲಿ ನಾನೂ ಕೂಡ ಭಾಗಿಯಾಗುತ್ತಿದ್ದು,  ಪಕ್ಷದ ಶಾಸಕರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು  ವಿಶ್ವಾಸಮತ ಸಂಬಂಧ ಭೇಟಿಯಾಗಲಿದ್ದು, ನಂತರ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡುವುದಾಗಿ ಹೇಳಿದ್ದಾರೆ.

ವಿಶ್ವಾಸಮತವನ್ನು ರದ್ದುಗೊಳಿಸುವಂತೆ ಡಿಎಂಕೆ ಪಕ್ಷದ ನಾಯಕರು ಮದ್ರಾಸ್ ಹೈಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯವು ನಾಳೆ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.

See also  ಜಲಪ್ರಳಯಕ್ಕೆ ಕೇರಳ ತತ್ತರ: ಕೊಚ್ಚಿಯಲ್ಲಿ ಪ್ರಧಾನಿ ಮೋದಿ ತುರ್ತು ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು