ಹೊಸದಿಲ್ಲಿ: ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುವ ಮೂಲಕ ಭಾರತದ ಪ್ರತಿಭಾವಂತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಬಿರುಗಾಳಿ ಎಬ್ಬಿಸಿದ್ದಾರೆ.
ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ, ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಗುರ್ವೇಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ, ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು.
ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ್ನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮರ್ಶಿಸುವ ಸ್ವತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಕೈ ಬರಹವುಳ್ಳ ಘೋಷ ಪಟ್ಟಿಯನ್ನು ಬರೆದುಕೊಂಡಿದ್ದಳು.
ಅಷ್ಟಕ್ಕೆ ಸುಮ್ಮನಿರದ ಗುರ್ ಮೆಹರ್ ನನ್ನ ಅಪ್ಪನನ್ನು ಪಾಕಿಸ್ತಾನ ಕೊಂದಿಲ್ಲ, ಯುದ್ದ ಅವರನ್ನು ಕೊಂದಿತು ಎಂಬ ಘೋಷಣೆಯುಳ್ಳ ಫೋಟೋ ಹಾಕಿದ್ದು, ಇದಕ್ಕೆ ಪ್ರತಿಯಾಗಿ ತಮ್ಮ ಟ್ವಿಟ್ಟರ್ ನಲ್ಲಿ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನಾನು ದ್ವಿ ಶತಕ ತ್ರಿಶತಕ ಸ್ಕೋರ್ ಮಾಡಿಲ್ಲ, ನನ್ನ ಬ್ಯಾಟ್ ಮಾಡಿತು ಎಂಬ ಬರಹವುಳ್ಳ ಪೋಸ್ಟ್ ಹಾಕಿ ಟ್ವೀಟ್ ಮಾಡಿದ್ದು, ಹಲವು ಮಂದಿ ಸೆಹ್ವಾಗ್ ಟ್ವೀಟ್ ಗೆ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.