ಹೈದರಾಬಾದ್: ರಾಹುಲ್ ಗಾಂಧಿ ಕಳೆದ ಹತ್ತು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿದ್ದು, ಸೋನಿಯಾ ಗಾಂಧಿ ಹೆಸರಿಗೆ ಮಾತ್ರವೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದಾರೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.
ಶನಿವಾರ ಮಾತನಾಡಿದ ಅವರು ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಉತ್ತರಪ್ರದೇಶ ಮತ್ತು ಉತ್ತರಖಾಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನಲೆಯಲ್ಲಿ ವೆಂಕಯ್ಯ ನಾಯ್ಡು ಅವರು ಈ ರೀತಿಯಾಗಿ ಹೇಳಿದ್ದಾರೆ.