ಹೊಸದಿಲ್ಲಿ: ಬಿಜೆಪಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ. ಬಿಜೆಪಿ ಮೂರು ಪಾಲಿಕೆಗಳಲ್ಲಿ ಜಯಭೇರಿ ಬಾರಿಸುತ್ತಿದ್ದಂತೆ ಸೋಲಿನ ಹೊಣೆ ಹೊತ್ತು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಕಾನ್ ರಾಜಿನಾಮೆ ನೀಡಿದ್ದಾರೆ. ಆದರೂ ಪಾಲಿಕೆ ಚುನಾವಣೆಯಲ್ಲಿನ ಗೆಲುವಿಗೆ ಬಿಜೆಪಿ ಸಂಭ್ರಮಾಚರಣೆ ಮಾಡುವುದಿಲ್ಲ ಎಂದು ಹೇಳಿದೆ.
ನಕ್ಸಲ್ ದಾಳಿಗೊಳಗಾಗಿ ಸುಕ್ಮಾ ಜಿಲ್ಲೆಯಲ್ಲಿ ಹುತಾತ್ಮರಾದ ಸಿಆರ್‍ಪಿಎಫ್ ಯೋಧರಿಗೆ ಗೌರವ ಸೂಚಕವಾಗಿ ಸಂಭ್ರಮಾಚರಣೆ ಕೈ ಬಿಡಲಾಗಿದೆ ಎಂದು ಮಾಧ್ಯಮದರೊಂದಿಗೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಪಾಲಿಕೆ ಚುನಾವಣೆಯಲ್ಲಿ ಪರಾಭವಗೊಂಡಿರುವುದರಿಂದ ಸೋಲಿನ ಹೊಣೆ ಹೊತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡಬೇಕೆಂದು ಮನೋಜ್ ತಿವಾರಿ ಹೇಳಿದ್ದಾರೆ.