ಆಂಧ್ರಪ್ರದೇಶ: ಆಂಧ್ರಪ್ರದೇಶದ ಅನಂತಪುರದಲ್ಲಿ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯಲ್ಲಿ 13 ಜನ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.
ಅನಂತಪುರದ ಗುಂಟಕಲ್ ನಲ್ಲಿರುವ ಯೆರ್ರ ತಿಮ್ಮರಾಜು ಕೆರೆಯಲ್ಲಿ ದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿ ಸುಮಾರು 15 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ, ಈ ಪೈಕಿ 13 ಮಂದಿ ಮುಳುಗಡೆಯಾಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ 8 ಮಂದಿಯ ಶವಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ಉಳಿದ 5 ಮಂದಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.