ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ಗಾಂಧಿಪುರಂ ಪ್ರದೇಶದಲ್ಲಿ ಸಿಪಿಐಎಂ ಕಚೇರಿ ಮೇಲೆ ಶನಿವಾರ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.
ಬೆಳಗಿನ ಜಾವ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳದ ಸಮೀಪ ನಿಲ್ಲಿಸಿದ್ದ ಕಾರಿಕೆ ಅಲ್ಪ ಪ್ರಮಾಣದ ಹಾನಿಯಾಗಿದೆ ಎಂದು ವರದಿಯಾಗಿದೆ.