ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಾವು ಮುಂದಿನ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ಎಂಬ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ್ದಾರೆ.
ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ಸರ್ಕಾರವಾಗಲಿ ಅಥವಾ ಪ್ರತಿಪಕ್ಷಗಳಾಗಲಿ ಇನ್ನೂ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಆದರೆ ದೇಶದ ಪ್ರಥಮ ಪ್ರಜೆಯ ಸ್ಥಾನಕ್ಕೆ ನನ್ನನ್ನು ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿವೆ.
ಎನ್ ಡಿ ಎ ಅಭ್ಯರ್ಥಿಯಾಗಿ ನನ್ನ ಹೆಸರು ಕೇಳಿಬರುತ್ತಿರುವುದು ಕೇವಲ ವದಂತಿ ಮಾತ್ರ ಎಂಬ ಸ್ಪಷ್ಟತೆಯನ್ನು ನೀಡಿದ್ದಾರೆ.