ನವದೆಹಲಿ: ಪ್ರತ್ಯೇಕ ಗೋರ್ಖಾ ರಾಜ್ಯಕ್ಕೆ ಆಗ್ರಹಿಸಿ ಡಾರ್ಜಿಲಿಂಗ್ ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದೆ.
ಪಶ್ಚಿಮ ಬಂಗಾಳ ವರದಿ ಸಲ್ಲಿಸಿದ ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಘಟನಾ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ್ದಾರೆ.
ಪ್ರತ್ಯೇಕ ಗೋರ್ಖಾ ರಾಜ್ಯಕ್ಕಾಗಿ ಆಗ್ರಹಿಸಿ ಗೋರ್ಖಾ ಜನಮುಖಿ ಮೋರ್ಚಾ ಸಂಘಟನೆ ನೀಡಿದ್ದ ಅನಿರ್ದಿಷ್ಟಾವಧಿ ಪ್ರತಿಭಟನಾ ಕರೆ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ.
ಪರಿಸ್ಥಿತಿ ಕುರಿತಂತೆ ಪಶ್ಚಿಮ ಬಂಗಾಳ ಸರ್ಕಾರ ಗೃಹ ಸಚಿವ ರಾಜನಾಥ ಸಿಂಗ್ ಅವರಿಗೆ ವರದಿಯನ್ನು ಸಲ್ಲಿಸಿದ್ದು, ಭದ್ರತೆ ಕುರಿತಂತೆ ಅವಲೋಕನೆ ನಡೆಸುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.