ಪೂಂಛ್: ಗಡಿಯಲ್ಲಿ ಪಾಕಿಸ್ತಾನ ಸೇನೆಯ ಪುಂಡಾಟ ಮುಂದವರಿದಿದೆ. ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್‌ನಲ್ಲಿ ಪಾಕ್ ಸೇನೆ ಮತ್ತೆ ಗುಂಡಿನ ದಾಳಿ ಮಾಡಿದೆ.
ಇಂದು ಬೆಳಗ್ಗೆ ಅಂತಾರಾಷ್ಟ್ರೀಯ ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಪೂಂಛ್ ಸೆಕ್ಟರ್‌ನಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ, ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ಕೂಡ ಪ್ರತಿ ದಾಳಿ ಮಾಡಿ, ಪಾಕ್‌ಗೆ ತಕ್ಕ ಪ್ರತ್ಯುತ್ತರ ನೀಡಿದೆ.
ಇನ್ನು, ನಿನ್ನೆ ಕೂಡ ಇದೇ ಪೂಂಛ್ ಸೆಕ್ಟರ್‌ನಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ, ದಾಳಿ ಮಾಡಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದರು. ಅಲ್ಲದೇ, ಇತ್ತ, ಭೀಂಬೆರ್ ಗಲಿ ಸೆಕ್ಟರ್‌ನಲ್ಲಿ ಸಹ ಪಾಕ್ ಸೇನೆ ಮತ್ತೆ ಗುಂಡಿನ ದಾಳಿ ನಡೆಸಿತ್ತು.