News Kannada
Sunday, September 25 2022

ದೇಶ-ವಿದೇಶ

ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್ - 1 min read

Photo Credit :

ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

ಇಸ್ಲಮಾಬಾದ್: ಭಾರತೀಯ ಸೇನೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹ್ಮದ್ ಚೌಧರಿಯವರು ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ 6 ನಾಗರೀಕರು ಮೃತಪಟ್ಟಿದ್ದಾರೆಂದು ಆರೋಪ ಮಾಡಿದೆ.

ಗುಂಡಿನ ದಾಳಿಗೆ 15 ಮಹಿಳೆಯರು ಹಾಗೂ 5 ಮಕ್ಕಳು ಸೇರಿ ಒಟ್ಟು 26 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. 26 ಮಂದಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ಉದ್ದೇಶಪೂರ್ವಕವಾಗಿ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು ಮಾನವ ಘನತೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಮಾನವೀಯ ಕಾನೂನುಗಳಿಗೆ ವಿರುದ್ಧವಾಗಿದೆ.

ಪ್ರಸ್ತುತ ಗಡಿಯಲ್ಲಿ ಭಾರತೀಯ ಸೇನೆ ನಡೆಸಿರುವ ಕದನ ವಿರಾಮ ಉಲ್ಲಂಘನೆ ಕುರಿತಂತೆ ತನಿಖೆ ನಡೆಸಬೇಕಿದೆ 2003ರ ಅಂತರಾಷ್ಟ್ರೀಯ ಗಡಿ ಹಾಗೂ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಭಾರತ ಗೌರವಿಸಬೇಕು ಹಾಗೂ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕದನ ವಿರಾಮ ಉಲ್ಲಂಘನೆ ಕುರಿತು ಒಪ್ಪಂದವನ್ನು ಗೌರವಿಸುವಂತೆ ಭಾರತ ತನ್ನ ಸೇನೆಗೆ ಸೂಚಿಸಬೇಕಿದೆ ಎಂದು ಸಮನ್ಸ್’ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

See also  ಛತ್ತೀಸ್‌ಗಢ: ಮೋಸ್ಟ್‌ ವಾಂಟೆಡ್ ನಕ್ಸಲ್ ನಾಯಕ ಕೋಸಾ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು