News Kannada
Tuesday, September 27 2022

ದೇಶ-ವಿದೇಶ

ದೀಪಾವಳಿ ಮಾರನೆ ದಿನ ಸಗಣಿಯಲ್ಲಿ ಬಡಿದಾಡುವ ಜನ.. - 1 min read

Photo Credit :

ದೀಪಾವಳಿ ಮಾರನೆ ದಿನ ಸಗಣಿಯಲ್ಲಿ ಬಡಿದಾಡುವ ಜನ..

ದೀಪಾವಳಿಯನ್ನು ಪಟಾಕಿ ಸಿಡಿಸಿ, ದೀಪಹಚ್ಚಿ, ಎಣ್ಣೆಸ್ನಾನ ಮಾಡಿ, ವಿವಿಧ ಭಕ್ಷ್ಯಬೋಜನ ಸವಿದು ಸಡಗರ ಸಂಭ್ರಮದಿಂದ ಎಲ್ಲೆಡೆ ಆಚರಿಸುವುದನ್ನು ನಾವು ಕಾಣುತ್ತೇವೆ. ಆದರೆ ತಮಿಳುನಾಡಿನ ತಾಳವಾಡಿ ಫಿರ್ಕಾ ವ್ಯಾಪ್ತಿಯ ಗುಮಟಾಪುರ ಗ್ರಾಮದಲ್ಲಿ ಜನ ಹಬ್ಬದಲ್ಲಿ ಸೆಗಣಿಯಲ್ಲಿ ಬಡಿದಾಡುವ ಮೂಲಕ ಆಚರಿಸುತ್ತಾರೆ.

ಇದು ಒಂದು ರೀತಿಯಲ್ಲಿ ಅಚ್ಚರಿಯಾದರೂ ಸತ್ಯ. ಇದನ್ನು ಅಲ್ಲಿನ ಜನ ಗೋರೆಹಬ್ಬ ಎಂದು ಕರೆಯುತ್ತಾರೆ. ಪ್ರತಿವರ್ಷ ದೀಪಾವಳಿಯ ಬಲಿಪಾಡ್ಯಮಿ ಹಬ್ಬವಾದ ಮಾರನೇ ದಿನ ಗ್ರಾಮದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಗ್ರಾಮದ ಯುವಕರು ಒಬ್ಬರಿಗೊಬ್ಬರು ಪರಸ್ಪರ ಸಗಣಿ ಎರಚಾಡಿಕೊಂಡು ಸಂಭ್ರಮಿಸಿಸುತ್ತಾರೆ. ಅಷ್ಟೇ ಅಲ್ಲ ಸಗಣಿ ಗುಡ್ಡೆಯಲ್ಲಿ ಉರುಳಾಡಿ ಖುಷಿಪಡುತ್ತಾರೆ. ಗ್ರಾಮದ ಎಲ್ಲ್ಲ ವರ್ಗದ ಯುವಕರೂ ಈ ವಿಶಿಷ್ಟ ಆಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಮೆರೆಯುತ್ತಾರೆ. ಈ ವಿಶಿಷ್ಟ ರೀತಿಯಲ್ಲಿ ಆಚರಿಸಲ್ಪಡುವ ಹಬ್ಬವನ್ನು ವೀಕ್ಷಿಸಲು ಸುತ್ತಮುತ್ತಲಿನ ಸಾವಿರಾರು ಜನರು ಆಗಮಿಸುತ್ತಾರೆ.

ಹಬ್ಬದ ದಿನ ಗೋವುಗಳು ಹಾಕಿದ ಸಗಣಿಯನ್ನು ಗ್ರಾಮದ ದೇವಸ್ಥಾನದ ಬಳಿ ಸುರಿದು ಗುಡ್ಡೆ ಮಾಡಲಾಗುತ್ತದೆ. ಇದೇ ವೇಳೆ ಮಕ್ಕಳು ಮನೆಗಳಿಂದ ಬೇಡಿ ತಂದ ಎಣ್ಣೆಯಿಂದ ಪೂಜೆ ಸಲ್ಲಿಸುತ್ತಾರೆ ನಂತರ ಸಮೀಪದಲ್ಲಿಯೇ ಇರುವ ಕಾರಪ್ಪ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.

ಗ್ರಾಮದ ಯುವಕನೊಬ್ಬನನ್ನು ಕತ್ತೆ ಮೇಲೆ ಕೂರಿಸಿಕೊಂಡು ಗ್ರಾಮದ ಪ್ರಮುಖ ಬಡಾವಣೆಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಕತ್ತೆ ಮೇಲೆ ಕುಳಿತ ಯುವಕನಿಗೆ ಚಾಡಿಕೋರ ಎಂದು ಹೆಸರಿಸಿ, ಆತನಿಗೆ ಹುಲ್ಲಿನಿಂದ ತಯಾರಿಸಿದ್ದ ಮೀಸೆಯನ್ನು, ಗಡ್ಡವನ್ನು ಕಟ್ಟಲಾಗಿತ್ತು. ಆತನನ್ನು ಗ್ರಾಮದ ಕೆರೆಯಿಂದ ಬೀರೇಶ್ವರನ ದೇವಸ್ಥಾನದವರೆಗೂ ಮೆರವಣಿಗೆಯಲ್ಲಿ ಕರೆತರಲಾಗುತ್ತದೆ. ಈ ವೇಳೆ ಆತನಿಗೆ ಅಶ್ಲೀಲ ಪದಗಳಿಂದ ನಿಂದಿಸಲಾಗುತ್ತದೆ. ಮೆರವಣಿಗೆ ಬಳಿಕ ಆತ ಹುಲ್ಲಿನ ಮೀಸೆ ಹಾಗೂ ಗಡ್ಡ ತೆಗೆದು ಸಗಣಿ ರಾಶಿಯಲ್ಲಿ ಇರಿಸಿ ಬೀರೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಸಗಣಿಯಾಟ ಆರಂಭವಾಗುತ್ತದೆ.

ಗ್ರಾಮದ ಯುವಕರು ಸಗಣಿಯನ್ನು ಉಂಡೆ ಮಾಡಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಸಗಣಿ ರಾಶಿಯಲ್ಲಿ ಉರುಳಾಡುತ್ತಾರೆ. ಈ ವಿಶಿಷ್ಟ ಆಚರಣೆ ಮುಗಿದ ನಂತರ ಚಾಡಿಕೋರ ಗುಡ್ಡದಲ್ಲಿ ಹಿಡಿಕಟ್ಟೆಗಳಿಂದ ಗೊಂಬೆಯೊಂದನ್ನು ನಿರ್ಮಿಸಿ ಸುಡಲಾಗುತ್ತದೆ. ಆ ನಂತರ ಸಗಣಿಯಾಟದಲ್ಲಿ ಭಾಗವಹಿಸಿದ್ದ ಯುವಕರು ಕೆರೆಗೆ ತೆರಳಿ ಸ್ನಾನ ಮಾಡಿ ಮನೆಗಳಿಗೆ ತೆರಳುತ್ತಾರೆ.

ಇಷ್ಟಕ್ಕೂ ಸಗಣಿಯಲ್ಲಿ ಬಡಿದಾಡುವುದು, ಚಾಡಿಕೋರನ ಕತ್ತೆ ಮೇಲೆ ಏಕೆ ಮೆರವಣಿಗೆ ಮಾಡುತ್ತಾರೆ ಎಂಬುದನ್ನು ನೋಡುವುದಾದರೆ, ಗುಮಟಾಪುರ ಗ್ರಾಮದ ಗೌಡನ ಮನೆಗೆ ವ್ಯಕ್ತಿಯೊಬ್ಬ ಕೆಲಸಕ್ಕೆ ಸೇರಿದ್ದನು. ಈತ ಇದ್ದಕ್ಕಿದ್ದಂತೆ ಮರಣ ಹೊಂದಿದನು. ಆತ ಬಳಸುತ್ತಿದ್ದ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತು. ಇದಾದ ಕೆಲ ದಿನಗಳ ನಂತರ ಗೌಡನ ಎತ್ತಿನ ಗಾಡಿಯೂ ಜೋಳಿಗೆ ಎಸೆಯಲಾಗಿದ್ದ ತಿಪ್ಪೆಯಲ್ಲಿ ಹಾದು ಹೋಗುವಾಗ ಎತ್ತಿನ ಗಾಡಿಯ ಚಕ್ರಕ್ಕೆ ಆ ಜೋಳಿಗೆ ಸಿಕ್ಕಿ ಹಾಕಿಕೊಳ್ಳುತ್ತದೆ.

ಈ ವೇಳೆ ಸಮೀಪದಲ್ಲಿಯೇ ಇದ್ದ ಶಿವಲಿಂಗದಿಂದ ರಕ್ತ ಬರುತ್ತದೆ. ಅದೇ ದಿನ ರಾತ್ರಿ ಗೌಡರ ಕನಸಿನಲ್ಲಿ ದೇವರು ಕಾಣಿಸಿಕೊಂಡು ಈ ದೋಷ ನಿವಾರಣೆಗಾಗಿ ಗ್ರಾಮದಲ್ಲಿ ಗುಡಿಯೊಂದನ್ನು ನಿರ್ಮಿಸಬೇಕು. ದೀಪಾವಳಿ ಹಬ್ಬದ ಮರುದಿನ ಸಗಣಿ ಹಬ್ಬ ಆಚರಿಸಬೇಕು ಎಂದು ಹೇಳಿತಂತೆ. ಹೀಗಾಗಿ ತಿಪ್ಪೆ ಸ್ಥಳದಲ್ಲಿ ಬೀರಪ್ಪನ ಗುಡಿ ಕಟ್ಟಿ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ. ಅದು ಏನೇ ಇರಲಿ ಒಟ್ಟಾರೆ ಗುಮಟಾಪುರದ ಗೋರೆ ಹಬ್ಬ ಇತರೆ ಕಡೆಗಳಲ್ಲಿ ಆಚರಿಸಲ್ಪಡುವ ಹಬ್ಬಕ್ಕಿಂತ ಭಿನ್ನವಾಗಿರುವುದಂತು ನಿಜ

See also  ಡಾ.ಕಫೀಲ್ ಖಾನ್ ಸಹೋದರ ಮೇಲೆ ಗುಂಡಿನ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು