News Kannada
Thursday, October 06 2022

ದೇಶ-ವಿದೇಶ

ಬಿಜೆಪಿ ದ್ವೇಷವನ್ನು ಹರಡಿದರೆ, ಕಾಂಗ್ರೆಸ್ ಶಾಂತಿಯಿಂದ ಮುನ್ನಡೆಯುತ್ತಿದೆ: ರಾಹುಲ್ ಗಾಂಧಿ - 1 min read

Photo Credit :

ಬಿಜೆಪಿ ದ್ವೇಷವನ್ನು ಹರಡಿದರೆ, ಕಾಂಗ್ರೆಸ್ ಶಾಂತಿಯಿಂದ ಮುನ್ನಡೆಯುತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸಬೇಕಾದರೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.  

ಪ್ರಸ್ತುತ ದೇಶದಲ್ಲಿ ಸಣ್ಣ ವಿಚಾರಗಳಿಗೆ ಗೊಂದಲ ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಬಿಜೆಪಿ ಸಿಟ್ಟು ಆಕ್ರೋಶದಿಂದ ಮುನ್ನಡೆಯುತ್ತಿದ್ದರೆ ಕಾಂಗ್ರೆಸ್ ಶಾಂತಿಯನ್ನು ಕಾಪಾಡುತ್ತಿದೆ ಎಂದರು.

ನಿನ್ನೆ ದೆಹಲಿಯಲ್ಲಿ ಆರಂಭಗೊಂಡ ಕಾಂಗ್ರೆಸ್ ಸಮಗ್ರ ಅಧಿವೇಶನದ ಎರಡನೇ ದಿನವಾದ ಇಂದು ಮಾತನಾಡಿದ ಅವರು, ಪ್ರಸ್ತುತ ಸ್ಥಿತಿಗತಿ ಹೊಸ ದಿಕ್ಕು ಮತ್ತು ಹೊಸ ದೃಷ್ಟಿಕೋನದತ್ತ ಸಾಗಲು ಇದು ಸರಿಯಾದ ಸಮಯವಾಗಿದೆ. ಈ ವೇಳೆ ಅವರು ದೇಶದ ರೈತರ ಹಾಗೂ ನಿರುದ್ಯೋಗ ಸಮಸ್ಯೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅಧಿವೇಶನದಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡ ಸೇರಿದಂತೆ ಇತರರು ಭಾಗಿಯಾಗಿದ್ದರು.

 

See also  ಕೊರೋನ ಅಪ್ಡೇಟ್ : 24 ಗಂಟೆಗಳಲ್ಲಿ ದೇಶದಲ್ಲಿ 11,067 ಹೊಸ ವೈರಸ್ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು