ಪಣಜಿ: ಪ್ಯಾಂಕ್ರಿಯಾಟೈಸಿಸ್(ಮೇದೋಜೀರಕ ಗ್ರಂಥಿ) ತೊಂದರೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿದ್ದು, ಎಪ್ರಿಲ್ ಮಧ್ಯಭಾಗದಲ್ಲಿ ಸ್ವದೇಶಕ್ಕೆ ಆಗಮಿಸಲಿರುವರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ಆರಂಭಧಲ್ಲಿ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಪರ್ರೀಕರ್ ಅವರು ಫೆ. 21ರಂದು ಬಿಡುಗಡೆಗೊಂಡು ರಾಜ್ಯ ಬಜೆಟ್ ಮಂಡಿಸಿದ್ದರು.
ಮಾ.5ರಂದು ಮತ್ತೆ ಮುಂಬಯಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದದ ಪರ್ರೀಕರ್ ಅವರನ್ನು ಅಮೆರಿಕಾಗೆ ಚಿಕಿತ್ಸೆಗೆ ತೆರಳಲು ಸೂಚಿಸಲಾಗಿತ್ತು. ಅಮೆರಿಕಾದಲ್ಲಿ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿದ್ದು, ಎಪ್ರಿಲ್ ಎರಡನೇ ವಾರ ಸ್ವದೇಶಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.
ಸ್ವದೇಶಕ್ಕೆ ಹಿಂತಿರುಗಿದ ಬಳಿಕ ಮತ್ತೆ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಾರೆಯಾ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ.