ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಕಲ್ಲುತೂರಾಟಗಾರರು ಮತ್ತು ಸೈನಿಕರ ಮಧ್ಯೆ ನಡೆದ ಸಂಘರ್ಷಕ್ಕೆ ಮೂವರು ನಾಗರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟವರಲ್ಲಿಇಬ್ಬರು ಯುವಕರು ಮತ್ತು ಒಬ್ಬ ಬಾಲಕಿ ಸೇರಿದ್ದಾರೆ.
ಕುಲಗಾಮ್ ನ ಹವೋರಾ ಮಿಶಿಪೋರಾ ಪ್ರದೇಶವನ್ನು ಹಾದುಹೋಗುವಾಗ ಜೀಪಿನ ಮೇಲೆ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದರು. ಅದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಗುಂಡು ಹಾರಿಸಬೇಕಾಯಿತು ಎಂದು ಸೇನೆ ಹೇಳಿದೆ.
ಇನ್ನೂ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಿದರೂ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ.