News Kannada
Friday, January 27 2023

ದೇಶ-ವಿದೇಶ

ನಿರ್ಭಯಾ ಪ್ರಕರಣ: ನಾಳೆ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪು

Photo Credit :

ನಿರ್ಭಯಾ ಪ್ರಕರಣ: ನಾಳೆ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪು

ಹೊಸದಿಲ್ಲಿ: ದೇಶವನ್ನೇ ತಲ್ಲಣಗೊಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾದ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ಪ್ರಕಟಿಸಲಿದೆ.

2012ರಲ್ಲಿ ಇಡೀ ದೇಶವನ್ನು ಬೆಚ್ಚಿಬೀಳಿಸಿದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್‌ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ಅದನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

 

2017ರ ಮೇ ತಿಂಗಳಲ್ಲಿ ಹೈಕೋರ್ಟ್‌ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿತ್ತು. ಅದಾದ ಬಳಿಕ, ತೀರ್ಪಿನ ಮರುಪರಿಶೀಲನೆಗೆ ನಾಲ್ವರು ಅಪರಾಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಿಜೆಐ ದೀಪಕ್‌ ಮಿಶ್ರಾ ನೇತೃತ್ವದ ಸುಪ್ರಿಂ ಕೋರ್ಟ್‌ ನ್ಯಾಯಪೀಠ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ. 

See also  ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಪ್ರಶಸ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

188
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು