ಮುಂಬಯಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮುಂಬಯಿ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.
ರಸ್ತೆಗಳಲ್ಲಿ ತುಂಬಿರುವ ನೀರಿನಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ತನಕ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಮಳೆಯಿಂದಾಗಿ ಮುಂಬಯಿ ಜನರ ಜೀವನಾಡಿ ರೈಲು ಸಂಚಾರವು ಸಂಪೂರ್ಣವಾಗಿ ರದ್ದುಗೊಂಡಿದೆ. ಕೆಲವೊಂದು ಕಡೆಗಳಲ್ಲಿ ತುಂಬಾ ವಿಳಂಬವಾಗಿ ರೈಲುಗಳು ಪ್ರಯಾಣಿಸುತ್ತಿದೆ.