News Kannada
Friday, December 02 2022

ದೇಶ-ವಿದೇಶ

ನಿರ್ಭಯಾ ಪ್ರಕರಣ: ಮೂವರು ಅಪರಾಧಿಗಳಿಗೆ ಗಲ್ಲು ಖಾಯಂ

Photo Credit :

ನಿರ್ಭಯಾ ಪ್ರಕರಣ: ಮೂವರು ಅಪರಾಧಿಗಳಿಗೆ ಗಲ್ಲು ಖಾಯಂ

ದೆಹಲಿ: ದೇಶವನ್ನೇ ತಲ್ಲಣಗೊಳಿಸಿದ ನಿರ್ಭಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಹೊರಡಿಸಿ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾದ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಮೂವರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಪಟ್ಟಂತೆ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಆರ್. ಭಾನುಮತಿ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಪ್ರಕರಣ ಕುರಿತ ತೀರ್ಪನ್ನು ನೀಡಿದೆ.

ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಪವನ್ ಗುಪ್ತಾ (31), ವಿನಯ್ ಶರ್ಮಾ (25) ಮತ್ತು ಮುಕೇಶ್ (31) ಅವರು ಸಲ್ಲಿಸಿದ್ದ ತೀರ್ಪು ಮರುಪರಿಶೀಲಿಸಲು ಅರ್ಜಿಯನ್ನು ಸಲ್ಲಿಸಿದ್ದರು.  ಪ್ರಕರಣದ ಮತ್ತೊಬ್ಬ ಆರೋಪಿ ಅಕ್ಷಯ್ ಠಾಕೂರ್ (33) ಇನ್ನೂ ಮರುಪರಿಶೀಲನಾ ಅರ್ಜಿ ಸಲ್ಲಿಸಿಲ್ಲ.

ಆರು ಮಂದಿ ಅಪರಾಧಿಗಳಲ್ಲಿ 2013ರಲ್ಲಿ ಓರ್ವ ತಿಹಾರ್ ಜೈಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಸಾವಿಗೆ ಶರಣಾಗಿದ್ದ. ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಉಳಿದ ಎಲ್ಲ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು.

See also  ಗಡಿ ನುಸುಳಲು ಯತ್ನಿಸಿದ ಮೂವರು ಪಾಕಿಸ್ತಾನ ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು