ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುರುವಾರ ಮಧ್ಯಾಹ್ನ ಊಟ ಸೇವಿಸಿದ 100 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುರಿತು ವರದಿಯಾಗಿದೆ.
ಊಟದ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಈ ಪೈಕಿ 10 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸದಾರ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಕೆ.ಚೌಧರಿ ತಿಳಿಸಿದ್ದಾರೆ.