ಜಾರ್ಖಂಡ್: ಬುರಾರಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಸಾಲಬಾಧೆಯಿಂದ ಬೇಸತ್ತು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾದ ಘಟನೆ ಜಾರ್ಖಾಂಡ್ ನಲ್ಲಿ ನಡೆದಿದೆ.
ಹಜಾರಿಭಾಗ್ನ ಮನೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಸಾಲ ಮರುಪಾವತಿಗೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಲಾಗಿದೆ.
ಡೆತ್ ನೋಟ್ ನಲ್ಲಿ ತಿಳಿಸಿರುವಂತೆ ಕುಟುಂಬ ಸದಸ್ಯರಲ್ಲಿ ಐವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಅದಕ್ಕೂ ಮುನ್ನ ೬ ವರ್ಷದ ಮಗುವನ್ನು ಟೆರೇಸ್ನಿಂದ ತಳ್ಳಿದ್ದಾರೆ.