ವಿಶಾಖಪಟ್ಟಣಂ: ಬಾಂಗ್ಲಾದೇಶಕ್ಕೆ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ನಕ್ಷತ್ರ ಆಮೆಗಳನ್ನು ಕೇಂದ್ರ ಕಂದಾಯ ನಿರ್ದೇಶನಾಲಯ(ಡಿಆರ್ ಐ)ದ ಅಧಿಕಾರಿಗಳು ವಿಜಾಗ್ ರೈಲ್ವೆ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಡಿಆರ್ ಐ ಅಧಿಕಾರಿಗಳು ರೈಲಿನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 1,125 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು, ಮೂರು ಮಂದಿಯನ್ನು ಬಂಧಿಸಿದ್ದಾರೆ. ಐದು ಬ್ಯಾಗ್ ಗಳಲ್ಲಿ ಈ ಆಮೆಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು ಎಂದು ಡಿಆರ್ ಐ ಅಧಿಕಾರಿಗಳು ತಿಳಿಸಿದ್ದಾರೆ.
ಅಳಿವಿನ ಅಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಆಂಧ್ರಪ್ರದೇಶದಲ್ಲಿ ಹಿಡಿದು ಕೊಲ್ಕತ್ತಾದ ಹೌರಾಗೆ ಸಾಗಿಸುತ್ತಿದ್ದರು. ಅಲ್ಲಿಂದ ಮತ್ತೊಬ್ಬ ವ್ಯಕ್ತಿ ಇದನ್ನು ಬಾಂಗ್ಲಾದೇಶಕ್ಕೆ ಸಾಗಿಸುವವನಿದ್ದ ಎಂದು ಬಂಧಿತರು ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ.
ಆಮೆಗಳು ಈಗ ಯಾವ ಸ್ಥಿತಿಯಲ್ಲಿದೆ ಎಂದು ಇದುವರೆಗೆ ತಿಳಿದಿಲ್ಲ. ಎಲ್ಲಾ ಆಮೆಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.