ಹೊಸದಿಲ್ಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ.
ಈ ಘಟನೆ ರಫಿ ಮಾರ್ಗ್ ಪ್ರದೇಶದಲ್ಲಿರುವ ಕಾನ್ಸ್ಟಿಟ್ಯೂಶನ್ ಕ್ಲಬ್ ಆಫ್ ಇಂಡಿಯಾದ ಹೊರಗಡೆ ನಡೆದಿದೆ. ಖಾಲಿದ್ ಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
‘ಯುನೈಟೆಡ್ ಅಗೇನ್ಸ್ಟ್ ಹೇಟ್’ ಎಂಬ ಸಂಘಟನೆ ಆಯೋಜಿಸಿದ್ದ ‘ಖೌಫ್ಫ್ ಸೇ ಆಜಾದಿ’ ಕಾರ್ಯಕ್ರದಮಲ್ಲಿ ಭಾಗವಹಿಸಲು ಬಂದ ವೇಳೆ ಈ ಅವಘಡ ಸಂಭವಿಸಿದೆ. ಬಿಳಿ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಏಕಾಏಕಿ ಖಾಲಿದ್ ಮೇಲೆ ಗುಂಡು ಹಾರಿಸಿದ್ದಾನೆ. ಆ ಬಳಿಕ ಅಲ್ಲಿಂದ್ದ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಖಾಲಿದ್ ಗೆ ಯಾವುದೇ ಅಪಾಯವಾಗಿಲ್ಲ.