ನವದೆಹಲಿ: ಹಲವಾರು ಬ್ಯಾಂಕ್ ಗಳಿಗೆ ಸಾವಿರಾರು ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿ ತಲೆಮರೆಸಿಕೊಂಡಿದ್ದು, ಭಾರತಕ್ಕೆ ಆತನನ್ನು ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.
ನೀರವ್ ಮೋದಿ ಲಂಡನ್ ನಲ್ಲಿದ್ದು, ಆತನನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕೆಂದು ಕೇಂದ್ರ ಸರ್ಕಾರವು ಇಂಗ್ಲೆಂಡ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ ಎಂದು ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಗೃಹಸಚಿವಾಲಯದ ಮೂಲಕ ಸಿಬಿಐ ಸಂಸ್ಥೆ ಇಂಗ್ಲೆಂಡ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಈ ಬಗ್ಗೆ ಭಾರತೀಯ ಹೈಕಮಿಷನ್ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.