ಶ್ರೀನಗರ: ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಮುಂದೆ ಶರಣಾಗಿದ್ದಾರೆ. ಗಡಿ ದಾಟಲು ಪ್ರಯತ್ನಿಸಿದ ಉಗ್ರರನ್ನು ಯೋಧರು ತಡೆದಿದ್ದಾರೆ.
ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಆ ಬಳಿಕ ಉಗ್ರರನ್ನು ಶರಣಾಗುವಂತೆ ಹೇಳಿದ್ದಾರೆಸಣ್ಣ ಪ್ರಮಾಣದ ಗುಂಡಿನ ಚಕಮಕಿ ನಡೆಯಿತು. ಆ ನಂತರ ಯೋಧರು ಉಗ್ರರಿಗೆ ಶರಣಾಗುವಂತೆ ಸೂಚಿಸಿದರು. ಖಚಿತ ಮಾಹಿತಿ ಮೇರೆಗೆ ಸಿ ಯೋಧರು ಮತ್ತು ಪೊಲೀಸರು ಕುಪ್ವಾರ ಜಿಲ್ಲೆಯ ಹಂದ್ವಾರ ಬಳಿಯ ಕಾಲರೂರ್ ಬಳಿ ಉಗ್ರರನ್ನು ಬಂಧಿಸಲು ಕಾಯುತ್ತಿದ್ದರು. ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ. ಶರಣಾದ ಉಗ್ರರಿಂದಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳ:ನ್ನು ವಶಪಡಿಸಿಕೊಂಡಿದ್ದಾರೆ.
ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಹುಡುಕಾಟ ನಡೆದಿದೆ ಎಂದು ಭಾರತೀಯ ಸೇನೆಯ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.