ಕೊಟ್ಟಾಯಂ: ಸ್ಥಳೀಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಎದುರಿಸುತ್ತಿರುವ ನೌಕಾಪಡೆ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ನೌಕಾಪಡೆ ಅಧಿಕಾರಿ ವಿರುದ್ಧ ಮಹಿಳೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ‘ನನ್ನ ಮಗಳನ್ನು ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ನೌಕಾಪಡೆಯ ಅಧಿಕಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ದೂರಿದ್ದಾರೆ. ಇದರ ಆಧಾರದ ಮೇಲೆ ಮುಂಬೈನಲ್ಲಿ ಪೆಟ್ಟಿ ಆಫೀಸರ್ ಆಗಿರುವ ಮುರಳಿ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈತನ ವಿರುದ್ಧ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಅಧಿಕಾರಿ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ (ತಡೆ) ಕಾಯ್ದೆ ಅನ್ವಯವೂ ಪ್ರಕರಣ ದಾಖಲಾಗಿದೆ.