‘ಮುಜಾಫರ್ ನಗರ: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತನ್ನ ತಂದೆಯೇ ಕಳೆದ 6 ತಿಂಗಳಿನಿಂದ ಅತ್ಯಾಚಾರ ನಡೆಸಿ ಪತ್ನಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದ ಬುಢಾನಾ ಎಂಬಲ್ಲಿ ನಡೆದಿದೆ. ಪತ್ನಿಗೆ ವಿಚಾರದ ತಿಳಿದ ಕೂಡಲೇ ವಿಕೃತ ಕಾಮಿ ಪತಿ ತನ್ನ ಮಗಳು ಹಾಗೂ ಪತ್ನಿಗೆ ಜೀಚ ಬೆದರಿಕೆಯನ್ನು ಒಡ್ಡಿದ್ದಾನೆ.
ಇದಕ್ಕೆ ಯಾವುದಕ್ಕೂ ಹೆದರದ ಪತ್ನಿ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ತಂದೆ ತಲೆಮರೆಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.