News Kannada
Sunday, September 25 2022

ದೇಶ-ವಿದೇಶ

ಆರ್ ಎಸ್ ಎಸ್ ಕೇರಳದಲ್ಲಿ ಹೊಸ ಕಾನೂನು- ಸುವ್ಯವಸ್ಥೆಯನ್ನು ಸೃಷ್ಟಿಸುತ್ತಿದೆ: ಸಿಎಂ ಪಿಣರಾಯಿ - 1 min read

Photo Credit :

ಆರ್ ಎಸ್ ಎಸ್ ಕೇರಳದಲ್ಲಿ ಹೊಸ ಕಾನೂನು- ಸುವ್ಯವಸ್ಥೆಯನ್ನು ಸೃಷ್ಟಿಸುತ್ತಿದೆ: ಸಿಎಂ ಪಿಣರಾಯಿ

ಕೇರಳ: ಕಳೆದ ಎರಡು ವಾರಗಳ ಹಿಂದೆ ಸುಪ್ರಿಂ ಕೋರ್ಟ್ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನೀಡಿದ ತೀರ್ಪಿನಿಂದ ಆರ್ ಎಸ್ ಎಸ್ ಕೇರಳದಲ್ಲಿ ಹೊಸದಾದ ಕಾನೂನು ಹಾಗೂ ಸುವ್ಯವಸ್ಥೆಯನ್ನು ಸೃಷ್ಟಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯನ್, ಕೇರಳ ಸರ್ಕಾರವು ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧವಾಗಿದೆ. ಆದರೆ ಆರ್ ಎಸ್ ಎಸ್ ಸುಪ್ರೀಂಕೋರ್ಟ್ ತೀರ್ಪನ್ನು ಮುಂದಿಟ್ಟುಕೊಂಡು ಕೇರಳದಲ್ಲಿ ಹೊಸ ಕಾನೂನು ಹಾಗೂ ಸುವ್ಯವಸ್ಥೆಯನ್ನು ಸೃಷ್ಟಿಸುತ್ತಿದೆ ಎಂದರು.

ಸೆಪ್ಟೆಂಬರ್ 28ರಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠದ ಐವರು ನ್ಯಾಯಮೂರ್ತಿಗಳು ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕಲ್ಪಿಸಿ ಐತಿಹಾಸಿಕ ತೀರ್ಪನ್ನು ನೀಡಿತ್ತು. ತೀರ್ಪಿನ ಬಳಿಕ ದೇಶದಾದ್ಯಂತ ಪರ ವಿರೋಧ ಚರ್ಚೆಗಳು ನಡೆದವು. ನಂತರ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯಿತು.

ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಕೇರಳ ಸರ್ಕಾರವು ಅನುಷ್ಠಾನ ಮಾಡುವ ಮೂಲಕ ಭಕ್ತರ ಭಾವನೆಗಳಿಗೆ ನೋವನ್ನು ಮಾಡುತ್ತಿದೆ ಎಂದು ಆರ್ ಎಸ್ ಎಸ್ ಆರೋಪಿಸಿತ್ತು.

See also  ಪಶ್ಚಿಮ ಬಂಗಾಳದಲ್ಲಿ ದೀದಿಗೆ ಆಘಾತ ನೀಡಿದ ಬಿಜೆಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು