ನವದೆಹಲಿ: ಅಯೋದ್ಯೆಯ ವಿವಾದಿತ ಭೂಪ್ರದೇಶವನ್ನು ಹಂಚಿಕೆ ಮಾಡಿದವರ ವಿರುದ್ಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆಯಲ್ಲಿ 2019ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಮುಂದೂಡಿದೆ.
2010ರಲ್ಲಿ ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುಮ್ಮಿ ವಕ್ಫ್ ಮಂಡಳಿಗೆ ಸಮಾನವಾಗಿ ಹಂಚಿಕೆ ಮಾಡಿ ಹೈಕೋರ್ಟ್ ನಲ್ಲಿ ತೀರ್ಪು ನೀಡಿತ್ತು.
ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.