ಬನಿಹಲ್: ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ ಒಬ್ಬ ಸಾವನ್ನಪ್ಪಿ 32 ಮಂದಿ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ಜಮ್ಮು-ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಬುಡ್ಗಂನಲ್ಲಿ ನಡೆದ ಚುನಾವಣೆಯಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಈ ಘಟನೆ ಬೆಳಿಗ್ಗೆ 8.45ಕ್ಕೆ ರಾಂಬನ್ ಜಿಲ್ಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಸಿಲುಕಿಕೊಂಡಿದ್ದ 32 ಮಂದಿಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.