ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದ್ದು, ಭದ್ರತಾ ಪಡೆಯ ಐವರು ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಉಗ್ರರ ವಿರುದ್ಧ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.
ಶನಿವಾರ ಪಾಕಿಸ್ತಾನ ಸೇನೆ ಕದನ ವಿರಾಮ ಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ರಜೋರಿಯಲ್ಲಿ ಶನಿವಾರ ನಡೆಸಿದ ಶೆಲ್ ದಾಳಿಗೆ ಮನೆ ಛಿದ್ರವಾಗಿದ್ದು ಮೂವರು ಸಾವನ್ನಪ್ಪಿದ್ದರು.