ಹೈದರಾಬಾದ್: ಸಮಾವೇಶವೊಂದರಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ್ದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿ ನಡೆದ ಕುರುಬ ಸಮಾವೇಶದಲ್ಲಿ ಭಾಗವಹಿಸಲು ಶುಕ್ರವಾರ ಆಗಮಿಸಿದ್ದ ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಇಲ್ಲಿನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವನಾಥ್ ಅವರು ಸ್ವಲ್ಪ ಚೇತರಿಸಿಕೊಂಡ ಬಳಿಕ ಅವರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಕರೆತಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ ಎಂದು ವರದಿಗಳು ಹೇಳಿವೆ.