ಗೋವಾ: ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಿಎಂ ಕಚೇರಿಯಿಂದ ತಿಳಿಸಲಾಗಿದೆ.
ಶನಿವಾರ ಮಾಧ್ಯಮದಲ್ಲಿ ಪ್ರಕಟವಾದ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಸಿಎಂ ಕಚೇರಿಯು ಸ್ಪಷ್ಟನೆ ನೀಡಿ, ‘ಸಿಎಂ ಪರಿಕ್ಕರ್ ಅವರ ರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ಹೇಳಿದೆ.
ಮಾಜಿ ಎಂಎಲ್ ಎ ಸಿದ್ಧಾರ್ಥ್ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಪರಿಕ್ಕರ್ ಅವರ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾತನಾಡಿದ ಅವರು, ಸಿಎಂ ಅವರ ಆರೋಗ್ಯ ಸ್ಥಿರವಾಗಿದ್ದು, ದಿನನಿತ್ಯದ ಆರೋಗ್ಯ ತಪಾಸಣೆ ನಡೆಯುತ್ತಿದೆ ಎಂದರು.