News Kannada
Wednesday, November 30 2022

ದೇಶ-ವಿದೇಶ

ರಾಜೀವ್ ಗಾಂಧಿ ಪುಣ್ಯಸ್ಮರಣೆ: ನಮನ ಸಲ್ಲಿಸಿದ ಪ್ರಧಾನಿ ಮೋದಿ - 1 min read

Photo Credit :

ರಾಜೀವ್ ಗಾಂಧಿ ಪುಣ್ಯಸ್ಮರಣೆ: ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 28ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ಸಲ್ಲಿಸಿದರು.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಮಂಗಳವಾರ ಬೆಳಿಗ್ಗೆ ರಾಜೀವ್ ಗಾಂಧಿ ಸಮಾಧಿ ಬಳಿ ಗೌರವ ಸಲ್ಲಿಸಿದರು. ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ ಕೂಡ ಇದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇದ್ದರು.

ರಾಜೀವ್ ಗಾಂಧಿ ಅವರು ಆಗಸ್ಟ್ 20, 1944ರಂದು ಜನಿಸಿದರು. ನಾಲ್ಕು ಬಾರಿ ಉತ್ತರ ಪ್ರದೇಶದ ಅಮೇಥಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ರಾಜೀವ್ ಗಾಂಧಿ 6ನೇ ಪ್ರಧಾನಿಯಾಗಿ 1984ರಿಂದ 1989ರ ವರೆಗೆ ಸೇವೆ ಸಲ್ಲಿಸಿದರು.

ರಾಜೀವ್ ಅವರು 1991ರಲ್ಲಿ ತಮಿಳು ನಾಡಿನಲ್ಲಿ ಚುನಾವಣಾ ರಾಲಿಯಲ್ಲಿ ಭಾಗವಹಿಸಿದ್ದ ವೇಳೆ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದರು.

See also  ಬಸ್ ನ ಬ್ರೇಕ್ ಫೇಲ್: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು