ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ತೇಜ್ ಪ್ರತಾಪ್ ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾರುತಿ ಬ್ರೆಜಾ ಕಾರಿನಲ್ಲಿ ತೆರಳುತ್ತಿದ್ದ ತೇಜ್ ಪ್ರತಾಪ್ ಅವರು ಇನ್ನೊಂದು ಕಾರಿಗೆ ಹೋಗಿ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ನುಜ್ಜುಗುಜ್ಜಾಗಿದೆ. ಇನ್ನೊಂದು ಕಾರಿನ ಚಾಲಕ ಸೇರಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ.