ನವದೆಹಲಿ: ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಯಲ್ಲಿ ಸ್ಪೀಕರ್ ಆಗುವುದು ಬಹುತೇಕ ಖಚಿತಗೊಂಡಿದೆ.
ಎನ್ ಡಿಎ ಓಂ ಬಿರ್ಲಾ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ. ವಿಪಕ್ಷಗಳು ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಸಾಧ್ಯತೆಯಿದೆ.
ಬಿರ್ಲಾ ಅವರು ರಾಜಸ್ಥಾನದ ಕೋಟಾ ಬುಂಡಿ ಕ್ಷೇತ್ರದ ಬಿಜೆಪಿ ಸಂಸದ. ಇವರು ಎರಡನೇ ಬಾರಿಗೆ ಆಯ್ಕೆಯಾಗಿರುವರು. ರಾಜಸ್ಥಾನ ವಿಧಾನಸಭೆಯಲ್ಲಿ ಮೂರು ಅವಧಿಗೆ ಸದಸ್ಯರಾಗಿದ್ದರು.
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಬಿರ್ಲಾ ಅವರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.