News Kannada
Sunday, October 02 2022

ದೇಶ-ವಿದೇಶ

ಭಾರೀ ಮಳೆಗೆ ಗುಜರಾತ್ ತತ್ತರ: ತಗ್ಗು ಪ್ರದೇಶಗಳು ಜಲಾವೃತ - 1 min read

Photo Credit :

ಭಾರೀ ಮಳೆಗೆ ಗುಜರಾತ್ ತತ್ತರ: ತಗ್ಗು ಪ್ರದೇಶಗಳು ಜಲಾವೃತ

ವಡೋದರ: ಭಾರೀ ಮಳೆಯಿಂದಾಗಿ ಗುಜರಾತ್ ನ ವಡೋದರವು ತತ್ತರಿಸಿದ ಹೋಗಿದ್ದು, ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ.

ಸ್ಥಳೀಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ತಂಡಗಳು ನೆರೆ ಪೀಡಿತ ಪ್ರದೇಶಗಳಿಂದ ಜನರನ್ನು ರಕ್ಷಿಸುತ್ತಿವೆ.

ಇದೇ ವೇಳೆ ರಾಜ್ಯ ಸರ್ಕಾರವು ತುರ್ತು ನೆರವು ದೂರವಾಣಿ ಸಂಖ್ಯೆಗಳನ್ನು ಕೂಡ ಬಿಡುಗಡೆ ಮಾಡಿದೆ. 1800 233 0265; 0265 2423101, 0265 2426101 ಈ ನಂಬರ್ ಗಳಿಗೆ ತುರ್ತು ಕರೆ ಮಾಡಬಹುದಾಗಿದೆ.

ಅತಿಯಾಗಿ ಮಳೆಯಾಗುತ್ತಿರುವ ಬಗ್ಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕೂಡ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಯಾವುದೇ ಸನ್ನಿವೇಶವನ್ನು ಎದುರಿಸಲು ತಯಾರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದ್ದಾರೆ.

ವಡೋದರದಲ್ಲಿ ಎಲ್ಲಾ ನಾಲ್ಕು ಸೇತುವೆಗಳನ್ನು ಮುಚ್ಚಲಾಗಿದೆ ಮತ್ತು ವಿಶ್ವಾಮಿತ್ರಿ ನದಿಯು ತನ್ನ ನಿಗದಿತ ಮಟ್ಟ ಮೀರಿ ಹರಿಯುತ್ತಿದೆ. ನೆರೆಪೀಡಿತ ಪ್ರದೇಶದಿಂದ ಸುಮಾರು 4 ಸಾವಿರ ಜನರನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ವಡೋದರದ ರೈಲ್ವೆ ನಿಲ್ದಾಣದಲ್ಲಿ ಕೂಡ ಭಾರೀ ಮಳೆಯಿಂದಾಗಿ ನೀರು ತುಂಬಿದ ಪರಿಣಾಮ ಸುಮಾರು 22 ರೈಲುಗಳನ್ನು ರದ್ದುಗೊಳಿಸಲಾಗಿದೆ.

See also  ದಂಪತಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು