ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಹಾಗೂ ಬಿಜೆಪಿಯ ಹಿರಿಯ ನೇತಾರೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ 9 ಗಂಟೆಗೆ ನಿಧನರಾದರು.
ಕಳೆದ ಕೆಲವು ಸಮಯದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಷ್ಮಾ ಸ್ವರಾಜ್ ಅವರು ಪ್ರಧಾನಿ ಮೋದಿ ಅವರು ಮೊದಲ ಸಲ ಪ್ರಧಾನಿಯಾದ ವೇಳೆ ವಿದೇಶಾಂಗ ಸಚಿವೆಯಾಗಿ ಕಾರ್ಯನಿರ್ವಹಿಸಿ, ಹೆಚ್ಚು ಖ್ಯಾತಿ ಪಡೆದಿದ್ದರು.
ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಅವರನ್ನು ನಿನ್ನೆ ಸಂಜೆ ವೇಳೆ ಸೇರಿಸಲಾಗಿತ್ತು. ಆದರೆ ರಾತ್ರಿ 9 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು.
ಬುಧವಾರ ಬೆಳಗ್ಗೆ 8 ಗಂಟೆಯಿಂದ 11 ಗಂಟೆ ತನಕ ಸುಷ್ಮಾ ಅವರ ಪಾರ್ಥಿವ ಶರೀರವನ್ನು ಜನಪತ್ ನಲ್ಲಿರುವ ಧವನ್ ದೀಪ್ ಕಟ್ಟಡದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ ವೇಳೆ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಂತಿಮ ಗೌರವ ಸಲ್ಲಿಸಲಾಗುತ್ತದೆ. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಲೋಧಿ ರಸ್ತೆಯಲ್ಲಿರುವ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆಯು ನಡೆಯಲಿದೆ.