ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿಯಾಗಿರುವ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ತಿಹಾರ್ ಜೈಲಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭೇಟಿಯಾದರು.
ಬುಧವಾರ ಡಿಕೆಶಿಯನ್ನು ಭೇಟಿಯಾದ ಸೋನಿಯಾ ಗಾಂಧಿ ಕೆಲಹೊತ್ತು ಮಾತುಕತೆ ನಡೆಸಿದರು.
ಸೋಮವಾರ ಕರ್ನಾಟಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಡಿಕೆಶಿಯನ್ನು ಭೇಟಿಯಾಗಿದ್ದರು.
ಅಕ್ರಮ ಹಣ ವರ್ಗಾವಣೆ ಸಂಬಂಧ ಕಳೆದ ತಿಂಗಳು ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ ವಿಚಾರ ನಡೆಸುತ್ತಿದ್ದಾರೆ.