ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ದೆಹಲಿ ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಚಿದಂಬರಂ ಅವರಿಗೆ ಮಂಗಳವಾರ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಬಂಧನದಲ್ಲಿರುವ ಕಾರಣದಿಂದಾಗಿ ಚಿದಂಬರಂ ಅವರಿಗೆ ಹೊರಬರಲು ಸಾಧ್ಯವಾಗಿರಲಿಲ್ಲ. ಚಿದಂಬರಂ ಅವರು ಅಕ್ಟೋಬರ್ 24ರ ತನಕ ಇ.ಡಿ. ವಶದಲ್ಲಿರುವರು.
ವಿತ್ತ ಸಚಿವರಾಗಿದ್ದ ವೇಳೆ ಐಎನ್ ಎಕ್ಸ್ ಮೀಡಿಯಾದಲ್ಲಿ ವಿದೇಶಿ ಹೂಡಿಕೆದಾರರಿಗೆ ನೆರವಾಗಲು ಅಕ್ರಮವೆಸಗಿರುವ ಬಗ್ಗೆ ಇ.ಡಿ. ತನಿಖೆ ನಡೆಸುತ್ತಿದೆ.