ಹರಿಯಾಣ: ತೀವ್ರ ಕುತೂಹಲ ಕೆರಳಿಸಿದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷವವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಅತಂತ್ರ ಪರಿಸ್ಥಿತಿ ಉಂಟಾಗಿದೆ.
ಇನ್ನೂ ಹರಿಯಾಣದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರಯಿಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಈಗಾಗಲೇ ಜೆಜೆಪಿ ಮುಖಂಡ ದುಷ್ಯಂತ್ ಚೌಟಾಲಾ ಜತೆ ಮಾತುಕತೆ ನಡೆಸಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಚೌಟಾಲಾ, ಈವರೆಗೆ ನಾನು ಯಾವುದೇ ರಾಜಕೀಯ ಪಕ್ಷದ ಜತೆ ಚರ್ಚೆ ನಡೆಸಿಲ್ಲ. ಬಿಜೆಪಿ ಅಥವಾ ಕಾಮಗ್ರೆಸ್ ಪಕ್ಷದ ನಾಯಕರು ನನ್ನೊಂದಿಗೆ ಮಾತುಕತೆ ನಡೆಸಿಲ್ಲ ಎಂದಿದ್ದಾರೆ.