ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯೊಂದಿಗೆ ಮತ್ತೇ ಅಧಿಕಾರವನ್ನು ಅಲಂಕರಿಸಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ 165 ಹಾಗೂ ಕಾಂಗ್ರೆಸ್ ಮತ್ತು ಎನ್ ಸಿಪಿ 94 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿತ್ತು.
ಬಿಜೆಪಿ- ಶಿವಸೇನೆ ಮೈತ್ರಿ ಕೂಟದ ಒಟ್ಟು 159 ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ.