ಚಂಡೀಗಡ: ಎರಡನೇ ಬಾರಿ ಹರಿಯಾಣ ಸರ್ಕಾರದ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಅವರೊಂದಿಗೆ ದೋಸ್ತಿ ಪಕ್ಷವಾದ ಜೆಜೆಪಿ ಮುಖ್ಯಸ್ಥ ದುಷ್ಯಂತ್ ಚೌಟಾಲ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರು ಇಬ್ಬರಿಗೂ ಪ್ರತಿಜ್ಙಾವಿಧಿ ಬೋಧಿಸಿದರು. ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡ, ಮಾಜಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಡಾಲ್, ಉತ್ತರಖಾಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.