ನವದೆಹಲಿ: ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಇದರಲ್ಲಿ ಯಾವುದೇ 50:50 ಫಾರ್ಮುಲಾ ಇಲ್ಲಾ ಎಂದು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶಿವಸೇನೆಗೆ ತಿರುಗೇಟು ನೀಡಿದ್ದಾರೆ.
ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ. ಮುಂದಿನ ಐದು ವರ್ಷಗಳ ಕಾಲ ನಾನು ಮುಖ್ಯಮಂತ್ರಿ ಆಗಿರುತ್ತೇನೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಫಡ್ನವೀಸ್ ತಿಳಿಸಿದರು.
ಚುನಾವಣಾ ಫಲಿತಾಂಶ ಪ್ರಕಟಗೊಂಡರೂ ಇದುವರೆಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ.