ನವದೆಹಲಿ: ಶ್ರೀನಗರದ ಲಾಲ್ ಚೌಕದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಒಂಭತ್ತು ಮಂದಿ ಗಾಯಗೊಂಡಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳೀವೆ.
ಸೋಮವಾರ ಬೆಳಗ್ಗೆ ಈ ಘಟನೆಯು ನಡೆದಿದ್ದು, ಪೊಲೀಸರು ಘಟನಾ ಸ್ಥಳವನ್ನು ಸುತ್ತುವರಿದಿದ್ದಾರೆ. ಜಮ್ಮುಕಾಶ್ಮೀರದಲ್ಲಿ ಸಾಮಾನ್ಯ ಜನರನ್ನು ಗುರಿಯಾಗಿಸಿಕೊಂಡು ಹಿಂಸೆ ನಡೆಸಲು ಉಗ್ರರು ಇಳಿದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶ್ರೀನಗರದ ಲಾಲ್ ಚೌಕ್ ನಲ್ಲಿ ಇರುವ ಮೌಲಾನಾ ಅಜಾದ್ ರಸ್ತೆಯಲ್ಲಿ ಈ ದಾಳಿಯು ನಡೆದಿದೆ. ಜಮ್ಮುಕಾಶ್ಮೀರದಲ್ಲಿ ಮೂರು ತಿಂಗಳ ಬಳಿಕ ಪರಿಸ್ಥಿತಿ ಸಾಮಾನ್ಯವಾಗುತ್ತಿರುವಂತೆ ಈ ದಾಳಿ ನಡೆದಿದೆ.